ಮದ್ದೂರು: ತಾಲ್ಲೂಕಿನ ಕೆ.ಹಾಗಲಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ವಿಚಾರ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯ ಸತೀಶ್ ಅವರಿಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ.
ಮಂಗಳವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿಯಿಂದ ನಡೆಯುತ್ತಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸುತ್ತಿದ್ದ ವೇಳೆ ಗ್ರಾಮಸ್ಥರಾದ ಶರತ್, ರಾಮಕೃಷ್ಣ, ಚಿಕ್ಕಲಿಂಗಯ್ಯ ಹಾಗೂ ಯಶೋಧ ಅವರು ಏಕಾಏಕಿ ಮಾತಿಗೆ ಮಾತು ಬೆಳೆಸಿ ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.
ಸತೀಶ್ ಅವರನ್ನು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತೀಶ್ ಜೆಡಿಎಸ್‌ನಲ್ಲಿ ಗುರುತಿಸಿ ಕೊಂಡಿದ್ದರು.















