ಮಧ್ಯಪ್ರದೇಶ: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಚೌಹಾಣ್, “ಗ್ವಾಲಿಯರ್ ನಿಂದ ದೆಹಲಿಗೆ ಹೋಗುವ ಮಾರ್ಗದಲ್ಲಿ ಟ್ರಕ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.”ನಾವು ಘಟನೆಯನ್ನು ಮತ್ತಷ್ಟು ಪರಿಶೀಲಿಸುತ್ತಿದ್ದೇವೆ” ಎಂದು ಅವರು ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ….
Saval TV on YouTube