ಮನೆ ದೇಶ ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಸಾವು

ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಸಾವು

0

ಭೋಪಾಲ್ (Bhopal): ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ.

ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ತುರ್ತು ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಇಡೀ ಆಸ್ಪತ್ರೆಗೆ ಹರಡಿದೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ, ಸ್ಥಳದಲ್ಲಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ.

10 ಜನರು ಮೃತಪಟ್ಟಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಗಾಯಗೊಂಡವರ ಬಗ್ಗೆ ಅವರು ಮಾಹಿತಿ ನೀಡಿಲ್ಲ. ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ  5 ಲಕ್ಷ ರೂ. ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಹಿಂದಿನ ಲೇಖನಕಿರುತೆರೆ ನಟ ಚಂದನ್‌ ಮೇಲೆ ಹಲ್ಲೆ
ಮುಂದಿನ ಲೇಖನಎನ್.ಟಿ. ರಾಮರಾವ್ 4ನೇ ಮಗಳು ಸಾವು: ಆತ್ಮಹತ್ಯೆ ಶಂಕೆ