ಮನೆ ಮನರಂಜನೆ ದಿ ಕಾಶ್ಮೀರ್ ಫೈಲ್ಸ್ ಚಿತ್ರ ನೋಡಲು ಮಧ್ಯಪ್ರದೇಶ ಪೊಲೀಸರಿಗೆ ರಜೆ ಘೋಷಣೆ

ದಿ ಕಾಶ್ಮೀರ್ ಫೈಲ್ಸ್ ಚಿತ್ರ ನೋಡಲು ಮಧ್ಯಪ್ರದೇಶ ಪೊಲೀಸರಿಗೆ ರಜೆ ಘೋಷಣೆ

0

ಭೋಪಾಲ್: ಕಳೆದ ವಾರ ಬಿಡುಗಡೆಯಾಗಿರುವ ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ವೀಕ್ಷಿಸಲು ಅನುಕೂಲವಾಗುವಂತೆ ಮಧ್ಯ ಪ್ರದೇಶ ಪೊಲೀಸರಿಗೆ ರಜೆ ಘೋಷಿಸಲಾಗುತ್ತದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾನುವಾರ ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ.

ಜತೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಪೊಲೀಸರಿಗೆ ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ವೀಕ್ಷಿಸಲು ರಜೆ ನೀಡುತ್ತಿದ್ದೇವೆ. ಈ ಕುರಿತು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಝೀ ಸ್ಟುಡಿಯೊ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದು, ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದಿರುವ ದೌರ್ಜನ್ಯವನ್ನು ಸಿನಿಮಾ ತೆರೆಯ ಮೇಲೆ ಪ್ರದರ್ಶಿಸಲಾಗಿದೆ.

‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರಕ್ಕೆ ಕರ್ನಾಟಕದಲ್ಲೂ ತೆರಿಗೆ ವಿನಾಯಿತಿ ನೀಡಲಾಗಿದೆ.