ಮಡಿಕೇರಿ(Madikeri): ಸಾಕಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ.
ಹಾಡಿ ನಿವಾಸಿ ಬಸಪ್ಪ (28) ಎಂಬುವವರೇ ಮೃತ ದುರ್ದೈವಿ.
ಇಂದು ಬೆಳಗ್ಗೆ ಮನೆಯಿಂದ ಹೊರ ಬಂದು ನಡೆದುಕೊಂಡು ಹೋಗುತ್ತಿದ್ದಾಗ ಸಾಕಾನೆ ಏಕಾಏಕಿ ದಾಳಿ ಮಾಡಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಬಸಪ್ಪನನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇದೇ ಸಂದರ್ಭ ಮಾವುತವೊಬ್ಬರ ಮೇಲೆ ಸಾಕಾನೆ ದಾಳಿ ಮಾಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Saval TV on YouTube