ಮಡಿಕೇರಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂರ್ನಾಡಿನ ಆರಿಫ್ (34) ಮೃತ ದುರ್ದೈವಿ.
ಮೂರ್ನಾಡಿನಲ್ಲಿ ನಡೆಯುತ್ತಿರುವ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆರಿಫ್ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆ.
ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube