ಮಡಿಕೇರಿ: ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹೊಡೆದು ಬಾಲಕನನ್ನು ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.
ನಿನ್ನೆ ತಡರಾತ್ರಿ ಆರೋಪಿ ಮನೆಗೆ 16 ವರ್ಷದ ಬಾಲಕ ತೆರಳಿದ್ದನು. ಈ ವೇಳೆ, ಆರೋಪಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿರಾಜಪೇಟೆ ಗ್ರಾಮೀಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Saval TV on YouTube