ಮಂಡ್ಯ(Mandya): ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿಂದು ಕುಂಭಮೇಳದ ಅಂಗವಾಗಿ ಜರುಗುವ ಮಹದೇಶ್ವರ ಜ್ಯೋತಿ ಯಾತ್ರೆಗೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಜಂಟಿಯಾಗಿ ಇಂದು ಮುಂಜಾನೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ,ಜಿಲ್ಲಾ ಎಸ್ಪಿ ಯತೀಶ್, ಜಿಪಂ ಸಿಇಒ ಶಾಂತಾ ಹುಲ್ಮನಿ, ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ ಹಾಗೂ ವಿವಿಧ ಮಠಾಧೀಶರು, ಭಕ್ತಾದಿಗಳು ಉಪಸ್ಥಿತರಿದ್ದರು.















