ಮನೆ ರಾಷ್ಟ್ರೀಯ ಮಹಾರಾಷ್ಟ್ರ: ಬಿಸಿಲ ಬೇಗೆಗೆ 25 ಮಂದಿ ಸಾವು

ಮಹಾರಾಷ್ಟ್ರ: ಬಿಸಿಲ ಬೇಗೆಗೆ 25 ಮಂದಿ ಸಾವು

0

ಮುಂಬೈ (Mumbai)-ಬಿಸಿಲ ಬೇಗೆಯಿಂದ 25 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇದು ಕಳೆದ ಐದು ವರ್ಷಗಳಲ್ಲೇ ದಾಖಲಾಗಿರುವ ಅತಿ ಹೆಚ್ಚು ಸಾವಾಗಿದೆ.

ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೆ ಕನಿಷ್ಟ 25 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಭಾರತದಲ್ಲಿ ಕಳೆದ ಏಪ್ರಿಲ್ ತಿಂಗಳಲ್ಲಿ 122 ವರ್ಷಗಳ ಬಳಿಕ ಅಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 

ಶುಕ್ರವಾರದವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹೇಳಿದೆ.

ಹಿಂದಿನ ಲೇಖನರಾಜ್ಯದಲ್ಲಿ 107 ಮಂದಿಗೆ ಕೊರೊನಾ ಸೋಂಕು
ಮುಂದಿನ ಲೇಖನಎಪಿಎಂಸಿ ಏಜೆಂಟ್‌ ರವಿ ಬರ್ಬರ ಹತ್ಯೆ