ಮನೆ ರಾಷ್ಟ್ರೀಯ ಮಹಾರಾಷ್ಟ್ರ: ಅಜಿತ್ ಪವಾರ್‌ ವಿರೋಧ ಪಕ್ಷದ ನಾಯಕ

ಮಹಾರಾಷ್ಟ್ರ: ಅಜಿತ್ ಪವಾರ್‌ ವಿರೋಧ ಪಕ್ಷದ ನಾಯಕ

0

ಮುಂಬೈ (Mumbai): ಎನ್‌ಸಿಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
62 ವರ್ಷದ ಪವಾರ್‌, ಶಿಂಧೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಎನ್‌ಸಿಪಿ, ಕಾಂಗ್ರೆಸ್‌, ಶಿವಸೇನಾ ಹಾಗೂ ಇತರ ವಿರೋಧ ಪಕ್ಷಗಳ ಗುಂಪನ್ನು ಮುನ್ನಡೆಸಲಿದ್ದಾರೆ.
ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವ ಏಕನಾಥ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಇತ್ತೀಚೆಗೆ ಬಂಡಾಯ ಘೋಷಿಸಿದ್ದರು. ಇದಾದ ಬಳಿಕ ಎನ್‌ಸಿಪಿ, ಶಿವಸೇನಾ ಹಾಗೂ ಕಾಂಗ್ರೆಸ್‌ ಪಕ್ಷಗಳನ್ನೊಳಗೊಂಡ ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟದ ಸರ್ಕಾರ ಪತನಗೊಂಡಿತ್ತು. ಹೀಗಾಗಿ, 31 ತಿಂಗಳು ಮುಖ್ಯಮಂತ್ರಿಯಾಗಿದ್ದ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಜೂನ್‌ 30ರಂದು ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿ ಬೆಂಬಲದೊಂದಿಗೆ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ.
ಈ ಬೆಳವಣಿಗೆಗಳ ಬಳಿಕ ಪ್ರಬಲ ಹಾಗೂ ಅನುಭವಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ವಿಪಕ್ಷಗಳು ನಿರ್ಧರಿಸಿದ್ದವು. ಅದರಂತೆ ಇದೀಗ ಅಜಿಜ್ ಪವಾರ್ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ.