ಮನೆ ರಾಜಕೀಯ ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಾರಿಗೆ ಬಸ್’ಗೆ ಕಪ್ಪು ಮಸಿ ಬಳಿದ ಪ್ರತಿಭಟನಾಕಾರರು

ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಾರಿಗೆ ಬಸ್’ಗೆ ಕಪ್ಪು ಮಸಿ ಬಳಿದ ಪ್ರತಿಭಟನಾಕಾರರು

0

ಮುಂಬೈ(Mumbai): ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿದೆ.

ಇದರೊಂದೊಗೆ ಸಂಘಟನೆಯ ಕಾರ್ಯಕರ್ತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌’ಗಳಿಗೆ ಕಪ್ಪುಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಣೆ ಜಿಲ್ಲೆಯ ದೌಂಡ್‌’ನ ಬಸ್‌ ನಿಲ್ದಾಣದಲ್ಲಿ ನಿಪ್ಪಾಣಿ–ಔರಂಗಾಬಾದ್‌ ಬಸ್‌ ಮೇಲೆ ಕೇಸರಿ ಹಾಗೂ ಕಪ್ಪು ಬಣ್ಣಗಳಿಂದ ಈ ಖಂಡನಾ ವಾಕ್ಯಗಳನ್ನು ಬರೆದಿದ್ದಾರೆ.

ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮರಾಠ ಮಹಾಸಂಘದ ಕಾರ್ಯ ವೈಖರಿಗೆ ಖಂಡನೆ ವ್ಯಕ್ತವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?:

ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದಿದ್ದರು.

ಕರ್ನಾಟಕದ ಗಡಿ ಜಿಲ್ಲೆಗಳ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರ 2004ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್​​ನಲ್ಲಿ ದಾವೆ ಹೂಡಿದೆ. ಇದುವರೆಗೂ ಅದು ಯಶಸ್ವಿಯಾಗಿಲ್ಲ, ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.