ಮನೆ ರಾಜಕೀಯ ಮಹಾರಾಷ್ಟ್ರ ಮಾದರಿ ಆಪರೇಷನ್ ಗೆ ಕರ್ನಾಟಕದಿಂದ ಆಹ್ವಾನ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮಾದರಿ ಆಪರೇಷನ್ ಗೆ ಕರ್ನಾಟಕದಿಂದ ಆಹ್ವಾನ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

0

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸುಳಿವು ನೀಡಿದ್ದಾರೆ.

Join Our Whatsapp Group

ತೆರೆಯ ಮರೆಯಲ್ಲಿ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್​​ ಮಾಡಲು  ಆಹ್ವಾನವಿದೆ ಎಂದಿರುವ ಅವರು, ‘ನಾಥ್’ ಮಾದರಿ ಆಪರೇಷನ್ ಮಹಾರಾಷ್ಟ್ರದಲ್ಲಿ ಖ್ಯಾತಿ ಗಳಿಸಿದೆ. ಅದೇ ಮಾದರಿಯ ಆಪರೇಷನ್ ​​ಗೆ ಕರ್ನಾಟಕದಿಂದಲೂ ಆಹ್ವಾನವಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಸತರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮೇ 9 ರಂದು ಏಕನಾಥ್ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆಗ ಮಾತನಾಡಿದ್ದ ಶಿಂಧೆ, ಲೋಕಸಭೆಯ ನಂತರ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ ಅಲ್ಲಿನ ಬಿಜೆಪಿ ಪದಾಧಿಕಾರಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ನನ್ನನ್ನು ಭೇಟಿಯಾಗಲು ಉತ್ಸುಕತೆಯಿಂದ ಬಂದಿದ್ದರು. ಈ ‘ನಾಥ’ ಯಾರೆಂದು ನೋಡಲು ಬಯಸಿದ್ದರು. ಆಗ, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ‘ನಾಥ್’ ಮಾದರಿ ಆಪರೇಷನ್​ಗೆ ಮನವಿ ಮಾಡಿದ್ದರು ಎಂದು ಶಿಂಧೆ ಹೇಳಿದ್ದಾರೆ.

ಆದರೆ, ಕರ್ನಾಟಕ ಸರ್ಕಾರ ಚುನಾವಣೆ ನಂತರ ಪತನವಾಗಲಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಲು ಶಿಂಧೆ ನಿರಾಕರಿಸಿದ್ದಾರೆ.  

ಹಿಂದಿನ ಲೇಖನಗರ್ಭಿಣಿ ಉದ್ಯೋಗಿಗಳ ಬಗ್ಗೆ ಉದ್ಯೋಗದಾತರಿಗೆ ಸಹಾನುಭೂತಿ ಇರಬೇಕು: ಬಾಂಬೆ ಹೈಕೋರ್ಟ್
ಮುಂದಿನ ಲೇಖನಪ್ರಜ್ವಲ್‌ ರೇವಣ್ಣ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ: ಸಾಕ್ಷ್ಯ ಸಂಗ್ರಹ