ಮನೆ ರಾಷ್ಟ್ರೀಯ ಮಹಾರಾಷ್ಟ್ರ: ಪೆಟ್ರೋಲ್ 5 ರೂ, ಡೀಸೆಲ್ 3 ರೂ. ವ್ಯಾಟ್ ದರ ಕಡಿತ

ಮಹಾರಾಷ್ಟ್ರ: ಪೆಟ್ರೋಲ್ 5 ರೂ, ಡೀಸೆಲ್ 3 ರೂ. ವ್ಯಾಟ್ ದರ ಕಡಿತ

0

ಮುಂಬೈ(Mumbai):  ಮಹಾರಾಷ್ಟ್ರಸರ್ಕಾರ ಪೆಟ್ರೋಲ್ ಮೇಲೆ 5 ರೂ, ಡಿಸೇಲ್ ಮೇಲೆ 3 ರೂ. ವ್ಯಾಟ್ ದರ ಕಡಿತ ಮಾಡಿ ಆದೇಶ ಹೊರಡಿಸಿದೆ.

ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ವ್ಯಾಟ್ ದರವನ್ನು ಕಡಿತ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 60 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ತಿಳಿಸಿದ್ದಾರೆ.

ಅಧಿಕಾರಕ್ಕೆ ಬಂದು 10 ದಿನದಲ್ಲೇ ನೂತನ ಸರ್ಕಾರ ಜನ ಪರವಾದ ನಿರ್ಧಾರ ಕೈಗೊಂಡಿದೆ. ವ್ಯಾಟ್ ಕಡಿತದಿಂದ ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದರು.

ಕೇಂದ್ರ ಸರ್ಕಾರ ಇತ್ತೀಚೆಗೆ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ನಂತರ ರಾಜ್ಯ ಸರ್ಕಾರಗಳು ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ತೆರಿಗೆಯನ್ನು ಕಡಿಮೆ ಮಾಡಿ ಜನರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಬೇಕು ಎಂದು ಕರೆ ನೀಡಿತ್ತು.