ಮನೆ ರಾಷ್ಟ್ರೀಯ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಮಹಾರಾಷ್ಟ್ರ ಪೊಲೀಸರು

ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಮಹಾರಾಷ್ಟ್ರ ಪೊಲೀಸರು

0

ಮಹಾರಾಷ್ಟ್ರ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು,  ಮಹಾರಾಷ್ಟ್ರ ಪೊಲೀಸರು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಗಡ್ಚಿರೋಲಿ ಅರಣ್ಯದಲ್ಲಿ ಅಡಗಿ ಕೂತಿದ್ದರು. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದರು.

ಬಳಿಕ ನಕ್ಸಲರಿಂದ ಕೆ 47 ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ, ಇವರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗಡ್ಚಿರೋಲಿ ಮಹಾರಾಷ್ಟ್ರದ ನಕ್ಸಲ್ ಪೀಡಿತ ಪ್ರದೇಶವಾಗಿದೆ.

ಛತ್ತೀಸ್‌ ಗಢದ ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಲ್ಲಿ ಶನಿವಾರದಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್ ​ನನ್ನು ಹತ್ಯೆ ಮಾಡಲಾಗಿತ್ತು. ಕೊಯ್ಲಿಬೆರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡವನ್ನು ಕಳುಹಿಸಲಾಗಿತ್ತು.