ಮನೆ ಕಾನೂನು ಮಹಿಷ ದಸರಾ: ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ

ಮಹಿಷ ದಸರಾ: ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ

0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದ ಸಂಭ್ರಮಕ್ಕೆ ಸಿದ್ಧವಾಗುತ್ತಿರುವ ಬೆನ್ನಲ್ಲೆ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಿಷ ದಸರಾ ವಿಚಾರ ಮತ್ತೆ ವಿವಾದ ಸೃಷ್ಟಿ ಮಾಡಿದೆ.

Join Our Whatsapp Group

ಈ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಮಹಿಷಾ ದಸರಾ ಕಾರ್ಯಕ್ರಮದ ಪರವಾಗಿ ಅಥವಾ ವಿರೋಧವಾಗಿ ಸಾಮಾಜಿಕ ಜಾಲತಾಣ/ಮಾಧ್ಯಮದ ಮೂಲಕ ಪ್ರಚೋದನಕಾರಿ ಹೇಳಿಕೆ ನೀಡುವ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವಂತಹ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಕಲಂ 126 ಬಿಎನ್ಎಸ್ಎಸ್ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಮೈಸೂರು ನಗರ ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜು ಎಂ ಪ್ರಕಟಣೆ ಹೊರಡಿಸಿದ್ದಾರೆ.