ಮನೆ ಸುದ್ದಿ ಜಾಲ ಚೈತ್ರಾ ಕುಂದಾಪುರ ಗ್ಯಾಂಗ್ ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್

ಚೈತ್ರಾ ಕುಂದಾಪುರ ಗ್ಯಾಂಗ್ ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್

0

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿಬಿದ್ದಿದ್ದಾನೆ.

ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್‌ ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸ್ತೀನಿ ಎಂದು ಚೈತ್ರಾ ಕುಂದಾಪುರ, ಗೋವಿಂದ್ ಬಾಬು ಎನ್ನುವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್ ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿಎಂ.ಎಲ್.ಎ ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.

ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್ ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

ಹಿಂದಿನ ಲೇಖನವಾದ್ಯಘೋಷಗಳೊಂದಿಗೆ ಅದ್ಧೂರಿಯಾಗಿ ಈದ್ಗಾ ಮೈದಾನ ತಲುಪಿದ ಗಣೇಶ ಮೂರ್ತಿ
ಮುಂದಿನ ಲೇಖನ‘ಕೃಷಿಕ್ ಸರ್ವೋದಯ ಫೌಂಡೇಶನ್’ ವತಿಯಿಂದ ಬೆಂಗಳೂರಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯ: ಇಂದೇ ಅರ್ಜಿ ಸಲ್ಲಿಸಿ