ಮಂಡ್ಯ: ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಇಂದು (ಜು.7) ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಬೇಡ್ಕರ್ ಅಂಬೇಡ್ಕರ್ ಭವನದ ನಿರ್ಮಾಣದ ಗುಣಮಟ್ಟದಲ್ಲಿ ತೊಂದರೆ ಇದೆ ಎಂದು ದೂರು ಸಲ್ಲಿಕೆಯಾಗಿತ್ತು, ಇದನ್ನು ಪರಿಶೀಲಿಸಿ ವರದಿ ಸಲ್ಲಿಕೆಯಾಗಿದೆ ಎಂದರು.
ಸ್ವಚ್ಛತೆ ಕಪಾಡಿ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವವರು ಸ್ವಚ್ಛತೆಗೆ ಆದ್ಯತೆ ನೀಡಿ, ಭವನಕ್ಕೆ ಆಗಮಿಸುವ ವೀಕ್ಷಕರಿಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಿ, ಭವನದ ಹೊರ ಆವರಣ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.
ಡಾ. ಬಿ.ಆರ್.ಅಂಬೇಡ್ಕರ್ ಭವನದ ನಿರ್ವಹಣೆ 1 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದ್ದು, ಮೊದಲನೇಯ ಹಂತದಲ್ಲಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಮೊದಲ ಹಂತದಲ್ಲಿ, ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಕುರ್ಚಿಗಳು, ಟೇಬಲ್ ಗಳು, ಫ್ಯಾನ್ ಗಳನ್ನು ಹಾಗೂ ಮಿನಿ ಹಾಲ್, ಜನರೇಟರ್, ಪೆಯಿಂಟಿAಗ್, ವಾಟರ್ ಲೀಕೇಜ್ ದುರಸ್ತಿ, ಸಣ್ಣ ಪುಟ್ಟ ಕೆಲಸಗಳು ಅವಶ್ಯಕವಾಗಿದ್ದು ಇದನ್ನು ಅನುದಾನದ ಹಣದಲ್ಲಿ ಸರಿಪಡಿಸಲಾಗುವುದು ಎಂದರು.
ಅಧಿಕಾರಿಗಳು ಸರಿಯಾದ ಯೋಜನೆ ರೂಪಿಸಿ ಸಮಿತಿಗೆ ತಿಳಿಸಿದ ನಂತರ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ವಾರದೊಳಗಾಗಿ ಯೋಜನೆ ಸಿದ್ಧ ಪಡಿಸಿ ಎಂದರು.
ಮುAದಿನ ಅನುದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸೋಲಾರ್ ಅಳವಡಿಸುವ ಚಿಂತನೆಯಲ್ಲಿ ಇರುವುದಾಗಿ ಸಭೆಗೆ ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ನಿರ್ಮಿತಿ ಕೇಂದ್ರದ ಜಯಪ್ರಕಾಶ್, ಡಾ.ಬಾಬು ಜಗಜೀವನರಾಂ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎನ್.ಆರ್. ಚಂದ್ರಶೇಖರ್
ಮುಖಂಡರುಗಳಾದ ಗುರು ಪ್ರಸಾದ್, ವೆಂಕಟಗಿರಿಯಯ್ಯ, ಮಹೇಶ್ ಕೃಷ್ಣ, ಎನ್.ಬಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.















