ಮನೆ ರಾಜ್ಯ ನಿರ್ವಹಣಾ ಕಾಮಗಾರಿ: ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ನಿರ್ವಹಣಾ ಕಾಮಗಾರಿ: ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

0

ಬೆಂಗಳೂರು (Bengaluru)- ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮೆಟ್ರೊ ರೈಲು ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣಾ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ಕೈಗೆತ್ತಿಕೊಂಡಿದೆ. ಹೀಗಾಗಿ ಮೇ 28 ರಂದು ರಾತ್ರಿ 9.30ರ ನಂತರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ತನಕ ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಎಂ.ಜಿ.ರಸ್ತೆ ಮತ್ತು ಟ್ರಿನಿಟಿ ಮೆಟ್ರೊ ನಿಲ್ದಾಣಗಳ ನಡುವೆ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಬೈಯಪ್ಪನಹಳ್ಳಿಯಿಂದ ಅಂದು ಕೊನೆಯ ರೈಲು ರಾತ್ರಿ 9.10ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿ ತನಕ ಹೋಗುವ ಕೊನೆಯ ರೈಲು ಕೆಂಗೇರಿ ಮೆಟ್ರೊ ನಿಲ್ದಾಣದಿಂದ 8.40ಕ್ಕೆ, ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ 9.10ಕ್ಕೆ ಹೊರಡಲಿದೆ.

ರಾತ್ರಿ 9.30ರ ನಂತರ ಕೆಂಗೇರಿಯಿಂದ ಎಂ.ಜಿ.ರಸ್ತೆ ತನಕ ಮಾತ್ರ ರೈಲುಗಳು ಸಂಚರಿಸಲಿವೆ. ಭಾನುವಾರ ಬೆಳಿಗ್ಗೆ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಳಿಗ್ಗೆ 7 ಗಂಟೆಯಿಂದ ವೇಳಾಪಟ್ಟಿಯಂತೆ ಎಲ್ಲ ಮಾರ್ಗದಲ್ಲೂ ರೈಲುಗಳ ಸಂಚಾರ ಪುನರ್ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಹಿಂದಿನ ಲೇಖನಲಡಾಕ್:‌ ನದಿಗೆ ಬಿದ್ದ ಯೋಧರಿದ್ದ ವಾಹನ; 7 ಯೋಧರ ಸಾವು
ಮುಂದಿನ ಲೇಖನ67ನೇ ರೈಲ್ವೆ ಸಾಪ್ತಾಹಿಕ ಪ್ರಶಸ್ತಿ ಪ್ರದಾನ