ಮನೆ ಸುದ್ದಿ ಜಾಲ ಹಿಜಾಬ್ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧಿಸುವುದು ಭಯಾನಕ: ಮಲಾಲ

ಹಿಜಾಬ್ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧಿಸುವುದು ಭಯಾನಕ: ಮಲಾಲ

0

ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್‌ ಝೈ ಪ್ರತಿಕ್ರಿಯಿಸಿದ್ದಾರೆ.

ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದೆ ಎಂಬ ವಿದ್ಯಾರ್ಥಿನಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ
ಮುಂದಿನ ಲೇಖನಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ: ಅಮರಿಂದರ್ ಸಿಂಗ್