ಮನೆ ಅಪರಾಧ ಮಳವಳ್ಳಿ: ದೇವಸ್ಥಾನಗಳಲ್ಲಿ ಸರಣಿ ಕಳ್ಳತನ

ಮಳವಳ್ಳಿ: ದೇವಸ್ಥಾನಗಳಲ್ಲಿ ಸರಣಿ ಕಳ್ಳತನ

0
ಸಾಂದರ್ಭಿಕ ಚಿತ್ರ

ಮಳವಳ್ಳಿ: ತಾಲೂಕಿನ ಬಿ.ಜಿ.ಪುರ ಮಂಟೇಸ್ವಾಮಿ ಮಠದ ಹುಂಡಿ, ಮುಟ್ಟನಹಳ್ಳಿ ದೊಡ್ಡಮ್ಮತಾಯಿ ಹಾಗೂ ವಾಸುಹಳ್ಳಿ ಬೋರೆಯಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಗಳಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಟೇಸ್ವಾಮಿ ಮಠದ ಆಡಳಿತಾಧಿಕಾರಿ ಭರತ್ ರಾಜೇ ಅರಸು, ಒಂದು ತಿಂಗಳ ಹಿಂದೆ ಮಂಟೇಸ್ವಾಮಿ ಮಠದಲ್ಲಿದ್ದ ಒಂದು ಹುಂಡಿ ಕಳ್ಳತನವಾಗಿದೆ.

ನಂತರ ಮುಟ್ಟನಹಳ್ಳಿ ದೊಡ್ಡಮ್ಮತಾಯಿ ದೇವಸ್ಥಾನದ ಹುಂಡಿಯನ್ನು ಕಳವು ಮಾಡಿದ್ದಾರೆ. ಕಳ್ಳರು ಹುಂಡಿ ತೆಗೆದುಕೊಂಡು ಹೋಗುವ ದೃಶ್ಯ ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಾರದ ಹಿಂದೆ ವಾಸುಹಳ್ಳಿ ಬೋರೆಯಲ್ಲಿರುವ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ ರೀತಿ ಕಳ್ಳತನವಾಗಿರುವುದು ಜನರಲ್ಲಿ ತೀವ್ರ ಆತಂಕವುಂಟು ಮಾಡಿದೆ ಎಂದಿದ್ದಾರೆ.

ಪೊಲೀಸರು ಈ ಬಗ್ಗೆ ಕ್ರಮಕೈಗೊಂಡು ಕಳ್ಳರನ್ನ ಬಂಧಿಸಿ, ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಭರತ್ ರಾಜೇ ಅರಸು ದೂರು ನೀಡಿದ್ದಾರೆ.

ಈ ಬಗ್ಗೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್ ಇನ್ಸ್ಪೆಕ್ಟರ್ ಅಶೋಕ್ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಕಳ್ಳತನ ನಡೆದಿರುವ ದೊಡ್ಡಮ್ಮತಾಯಿ ದೇವಸ್ಥಾನವನ್ನು ಪರಿಶೀಲನೆ ನಡೆಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾದ ಮೈದುನ
ಮುಂದಿನ ಲೇಖನನೇಪಾಳದಲ್ಲಿ ಭೂಕಂಪ: ಅಗತ್ಯ ನೆರವು ನೀಡಲು ಭಾರತ ಸಿದ್ದ- ಪ್ರಧಾನಿ ಮೋದಿ