ಚಾಮರಾಜನಗರ; ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮವನ್ನು ‘ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ’ ಎಂದು ಘೋಷಣೆ ಮಾಡಲು ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ ಕರ್ನಾಟಕದ 6ನೇ ಹುಲಿ ಸಂರಕ್ಷಿತ ಪ್ರದೇಶವಾಗಲಿದೆ. ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ಬೇಕಾದ ತಯಾರಿಯನ್ನು ಅರಣ್ಯ ಇಲಾಖೆ ಮಾಡಿಕೊಂಡಿತ್ತು. ಈಗ ಪ್ರಸ್ತಾವನೆಗೆ ಸರ್ಕಾರದ ಒಪ್ಪಿಗೆಯೂ ದೊರಕಿದೆ.
ಸತ್ಯಮಂಗಲ ಹುಲಿ ರಕ್ಷಿತಾರಣ್ಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಮಲೆ ಮಹದೇಶ್ವರ ವನ್ಯಧಾಮವನ್ನು ‘ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ’ ಎಂದು ಘೋಷಣೆ ಮಾಡಲು ಒಪ್ಪಿಗೆ ನೀಡಲಾಯಿತು
ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಮಹದೇಶ್ವರ ಬೆಟ್ಟ, ಹನೂರು, ಯಡೆಯಾರಳ್ಳಿ ರಕ್ಷಿತ ಅರಣ್ಯವನ್ನು ಒಗ್ಗೂಡಿಸಿ 906 ಚದರ ಕಿ. ಮೀ. ವಿಸ್ತೀರ್ಣವನ್ನು ಇದರ ವ್ಯಾಪ್ತಿಗೆ ತರಲಾಗುತ್ತದೆ.