ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ‘ಮೊಯಿಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ’ ಎಂದರು.
Saval TV on YouTube