ಮನೆ ರಾಜ್ಯ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ

0

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಆರಾಮವಾಗಿ ಇದ್ದಾರೆ. ಸ್ವಲ್ಪ ಆಯಾಸ ಇತ್ತು. ಅದಕ್ಕೆ ಚೆಕಪ್ ಮಾಡಿದ್ರು. ಸರಿ ಹೋಗಿದ್ದಾರೆ. ಚೆನ್ನಾಗಿ ಮಾತನಾಡಿದ್ರು. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಹೇಳಿದರು.