ಮನೆ ರಾಷ್ಟ್ರೀಯ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

0

ನವದೆಹಲಿ(Newdelhi):  ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ  ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮವಿದ್ದು ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

 ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಸ್ಪರ್ಧೆಗಿಳಿದಿದ್ದಾರೆ.