ಮನೆ ರಾಷ್ಟ್ರೀಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಡಬ್ಲ್ಯುಸಿ ಸದಸ್ಯರ ನಾಮ ನಿರ್ದೇಶನ ಮಾಡುವ ಅಧಿಕಾರ

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಡಬ್ಲ್ಯುಸಿ ಸದಸ್ಯರ ನಾಮ ನಿರ್ದೇಶನ ಮಾಡುವ ಅಧಿಕಾರ

0

ನವ ರಾಯಪುರ: ಉನ್ನತ ನಿರ್ಧಾರಗಳನ್ನು ಕೈಗೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ(ಸಿಡಬ್ಲ್ಯುಸಿ) ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ.

ಶುಕ್ರವಾರ ನಡೆದ ಪಕ್ಷದ ಉನ್ನತ ಸಮಿತಿ ಸಭೆಯಲ್ಲಿ ಈ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿದೆ. ಸಿಡಬ್ಲ್ಯುಸಿಗೆ ಚುನಾವಣೆ ನಡೆಸುವ ಕುರಿತಂತೆ ಸಮಿತಿ ಮುಕ್ತವಾಗಿ ಚರ್ಚಿಸಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಬಹುತೇಕ ಎಲ್ಲ 45 ಮಂದಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಖರ್ಗೆಯವರಿಗೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ಅಧಿಕಾರ ನೀಡುವ ನಿರ್ಣಯವನ್ನು ಅವಿರೋಧವಾಗಿ ಕೈಗೊಳ್ಳಲಾಯಿತು ಎಂದು ಅವರು ಹೇಳಿದರು.

ಹಲವು ಸದಸ್ಯರು ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸುವ ಪರ ಮತ್ತು ವಿರೋಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಎಂದು ತಿಳಿಸಿದರು.

ಎಐಸಿಸಿ ಮತ್ತು ಪಿಸಿಸಿ ಸದಸ್ಯರು ಈ ಒಮ್ಮತದ ನಿರ್ಣಯವನ್ನು ಬೆಂಬಲಿಸುವ ವಿಶ್ವಾಸವಿದೆ. ಪಕ್ಷದ ಸಂವಿಧಾನದ 32 ನಿಯಮಗಳು ಮತ್ತು ನಿಬಂಧನೆಗಳಲ್ಲಿ 16 ತಿದ್ದುಪಡಿ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕಾರ್ಯಕಾರಿ ಸಮಿತಿಯಲ್ಲಿ ಕಾಂಗ್ರೆಸ್‌ನ ಎಲ್ಲ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಪಕ್ಷದ ಮಾಜಿ ಅಧ್ಯಕ್ಷರುಗಳಿಗೆ ಸದಸ್ಯತ್ವ ನೀಡಲಾಗುವುದು ‌ಎಂದೂ ಅವರು ಹೇಳಿದರು.

ಹಿಂದಿನ ಲೇಖನದೆಹಲಿಯಲ್ಲಿರುವ ಪುರಾತನ ಕೋಟೆಗಳು
ಮುಂದಿನ ಲೇಖನಉಪಲೋಕಾಯುಕ್ತರ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್