ಮನೆ ರಾಜಕೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕಾರ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕಾರ

0

ನವದೆಹಲಿ(Newdelhi): ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ವಹಿಸಿಕೊಳ್ಳಲಿದ್ದು, ನವದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಭರದ ಸಿದ್ಧತೆಗಳು ಸಾಗಿವೆ.

ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಈ ಮೂಲಕ ನೆಹರೂ–ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಪಕ್ಷದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದಾರೆ. ಈ ವೇಳೆ ಪಕ್ಷದ ನಾಯಕ ರಾಹುಲ್‌ ಗಾಂಧಿ ಉಪಸ್ಥಿತರಿರಲಿದ್ದಾರೆ.

ಪಕ್ಷದ ಅತ್ಯುನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ಅವರು ಸಂಸದ ಶಶಿ ತರೂರ್ ಅವರನ್ನು ಮಣಿಸಿದ್ದರು.

ಹಿಂದಿನ ಲೇಖನಸೋಮಣ್ಣ ವಿರುದ್ಧ ದೂರು ನೀಡುವಂತೆ ಮಾನಸಿಕ ಹಿಂಸೆ: ಸಂತ್ರಸ್ತೆಯಿಂದ ದೂರು ದಾಖಲು
ಮುಂದಿನ ಲೇಖನದೀಪ