ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಳ್ಳ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅತ್ತ ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಅವರು ಚೇತರಿಸಿಕೊಳ್ಳುವ ಹಂತದಲ್ಲಿ ಇದ್ದಾರೆ.
ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ.
ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಗಂಪಡಿಸಿದ್ದರು. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್ಮೆಂಟ್ಗೆ ನುಗ್ಗಿದ್ದ. ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದ. ಆತನ ಈಗ ತ್ವರಿತವಾಗಿ ಬಂಧಿಸಲಾಗಿದೆ.
Saval TV on YouTube