ಹೊಸದಿಲ್ಲಿ: ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂದಿತರಾಮಾಗಿದ್ದ 36 ವರ್ಷದ ವ್ಯಕ್ತಿಯೊಬ್ಬ ಭಾನುವಾರ ನಿಗೂಢವಾಗಿ ಪೊಲೀಸ್ ಕಸ್ಟಡಿಯಲ್ಲಿ ಸಾವಿನ ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಪೊಲೀಸ್ ಠಾಣೆಯಲ್ಲಿ ಬೆಳಿಗ್ಗೆ 6:30ರ ಸುಮಾರಿಗೆ ಕಸ್ಟಡಿ ಸಾವು ವರದಿಯಾಗಿದೆ. ಮೃತ ಶೇಖ್ ಸಹದತ್ ದೆಹಲಿಯ ಜಹಂಗೀರರ್ಪುರಿ ನಿವಾಸಿಯಾಗಿದ್ದು, ಆತನನ್ನು ಇತರ ನಾಲ್ವರೊಂದಿಗೆ ಶನಿವಾರ ಬಂಧಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಹದತ್ ಈ ಹಿಂದೆ 18ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಸಹದತ್ ನನ್ನು ಒಂದು ದಿನದ ಪೊಲೀಸ್ ಕಸ್ಟರ್ಡಿಗೆ ಕಳುಹಿಸಲಾಗಿತ್ತು. ಆದರೆ ಇತರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯ ತಿಳಿಸಿದ್ದಾರೆ.
ಶನಿವಾರ ಸಂಜೆ ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ ಅವರನ್ನು ಠಾಣೆಗೆ ಕರೆದೊಯ್ದು ಲಾಕ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 6:30 ಸುಮಾರಿಗೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಹದತ್ ತೀವ್ರವಾಗಿ ಉಸಿರಾಡುತ್ತಿರುವುದನ್ನು ಗಮನಿಸಿದ್ದು, ಕೂಡಲೇ ಕರ್ತವ್ಯ ಅಧಿಕಾರಿಗೆ ಮಾಹಿತಿ ನೀಡಿದ್ದು, ಅತನನ್ನು ಬಿಎಸ್ಎ ಆಸ್ಪತ್ರೆಗೆ ಸಾಗಿಸಲಾಗಿತ್ತು, ಅಲ್ಲಿ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.