ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಮೆಟ್ರೋ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ ಅನಿಲ್ ಎರಡು ಹಳಿಗಳ ಮಧ್ಯೆ ಮಲಗಿದ್ದಾನೆ. ಕೂಡಲೇ, ಲೋಕೋ ಪೈಲಟ್ ಮೆಟ್ರೋ ನಿಲ್ಲಿಸಿದ್ದರಿಂದ ಅನಿಲ್ ಬಚಾವ್ ಆಗಿದ್ದಾನೆ. ಬಳಿಕ ಫ್ಲಾಟ್ಫಾರಂನಲ್ಲಿದ್ದ ಸಿಬ್ಬಂದಿ ಅನಿಲ್ ಕುಮಾರ್ ಪಾಂಡೆಯನ್ನು ರಕ್ಷಿಸಿದ್ದಾರೆ. ಬಿಎಂಆರ್ಸಿಎಲ್ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಉತ್ತರ ಪ್ರದೇಶ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ, ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿದ್ದಾರೆ. ಸದ್ಯ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿದೆ.














