ಮನೆ ಅಪರಾಧ ಮಾಂಸದ ಅಂಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಮಾಂಸದ ಅಂಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

0

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಮಾಂಸದ ಅಂಗಡಿಯಲ್ಲಿ ಬರ್ಬರ ಹತ್ಯೆ ಮಾಡಿದ ಘಟನೆ ಬೇಗೂರು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

Join Our Whatsapp Group

ಶಿವಾಜಿನಗರ ನಿವಾಸಿ ಅಫ್ಸರ್ (45) ಎಂಬಾತನ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಲಾಗಿದೆ.

ಕೊಲೆ ಆರೋಪಿ ಅಕ್ಬರ್ (47) ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 8 ತಿಂಗಳ ಹಿಂದೆ ಅಕ್ಬರ್ ಹಾಗೂ ಅಫ್ಸರ್ ಸೇರಿ ಮಾಂಸದಂಗಡಿ ಆರಂಭಿಸಿದ್ದರು. ಆದರೆ, ನಿರೀಕ್ಷಿಸಿದಂತೆ ವ್ಯಾಪಾರವಾಗದ ಹಿನ್ನೆಲೆ ತಾನೇ ಪ್ರತ್ಯೇಕ ಅಂಗಡಿ ತೆರೆಯಲು ಅಕ್ಬರ್ ನಿರ್ಧರಿಸಿದ್ದ. ಆದ್ದರಿಂದ ಅಂಗಡಿ ಆರಂಭಿಸುವಾಗ ತಾನು ನೀಡಿದ್ದ ಬಂಡವಾಳದ ಹಣವನ್ನ ವಾಪಸ್ ನೀಡುವಂತೆ ಅಫ್ಸರ್‌ನನ್ನ ಕೇಳಿದ್ದ. 3 ಲಕ್ಷ ರೂ. ಹಣ ವಾಪಸ್ ನೀಡಿದ್ದ ಅಫ್ಸರ್‌‌, 20 ಸಾವಿರ ರೂ. ಬಾಕಿ ಉಳಿಸಿಕೊಂಡು ಸತಾಯಿಸುತ್ತಿದ್ದ. ಇದೇ ವಿಚಾರವಾಗಿ ತಡರಾತ್ರಿ ಅಂಗಡಿಯಲ್ಲೇ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಸಿಟ್ಟಿಗೆದ್ದ ಅಕ್ಬರ್, ಅಂಗಡಿಯಲ್ಲಿದ್ದ ಮಚ್ಚಿನಿಂದಲೇ ಅಫ್ಸರ್ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಅಫ್ಸರ್ ಸ್ಥಳದಲ್ಲೇ ಮೃತಪಟ್ಟಿರುವ ಮಾಹಿತಿ ತಿಳಿದು ಬಂದಿದೆ.

ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು, ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿ ಅಕ್ಬರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.