ಮನೆ ಅಪರಾಧ ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

0

ನೆಲಮಂಗಲ: ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ನಡೆದಿದೆ.

Join Our Whatsapp Group

18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದರು. ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೂಡ ಮಾಡಲಾಗಿದ್ದು, ಗಲಾಟೆ ನಡೆದಿದೆ. ಗಲಾಟೆ ಬಳಿಕ ಮನೆ ತೊರೆದು ಪತ್ನಿ ತವರು ಸೇರಿದ್ದರು.

ಇತ್ತ ಯಾರು ಇಲ್ಲದ ವೇಳೆ ಮನೆಯ ಫ್ಯಾನ್​ಗೆ ನೇಣುಬಿಗಿದು ಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಾಲರಾಜ್ ಗ್ರಾಮಾಂತರ ಭಾಗದಲ್ಲಿ ಕ್ರಿಕೆಟ್ ಪಟುವಾಗಿದ್ದರು. ತನ್ನ ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್​​ನಲ್ಲಿ ಉಲ್ಲೇಖಿಸಲಾಗಿದೆ.

ಅವರ ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನು ಇಟ್ಟು ಶವ ಸಂಸ್ಕಾರ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.