ಹುಳಿಯಾರು (ಚಿಕ್ಕನಾಯಕನಹಳ್ಳಿ): ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ರಾತ್ರಿ ಟಾನಿಕ್ ಎಂದು ಕ್ರಿಮಿನಾಶಕ ಸೇವಿಸಿ ಚೊಟ್ನರ್ ನಿಂಗಪ್ಪ(65) ಎಂಬುವರು ಮೃತಪಟ್ಟಿದ್ದಾರೆ.
ಕ್ರಿಮಿನಾಶಕ ಸೇವಿಸಿದ್ದ ಅವರನ್ನು ತಕ್ಷಣಕ್ಕೆ ಸಾರ್ವಜನಿಕ ಚಿಕಿತ್ಸೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ.
ತಮ್ಮಡಿಹಳ್ಳಿ ಗೊಲ್ಲರಹಟ್ಟಿಯ ಮೃತರ ತೋಟದಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.