ಬೆಂಗಳೂರು: ತನ್ನ ಮಗಳನ್ನು ನಿಂದಿಸಿದ್ದಕ್ಕಾಗಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಹತ್ಯೆಗೈದ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ನೇಪಾಳ ಮೂಲದ ಪ್ರೇಮ್ ರಾಜ್ ಉಪಾಧ್ಯಾಯ (57) ಕೊಲೆಯಾದವ. ಧರ್ಮೇಂದ್ರ ಸಿಂಗ್ ಹತ್ಯೆಗೈದ ಆರೋಪಿ.
ಇಬ್ಬರು ನೇಪಾಳ ಮೂಲದವರಾಗಿದ್ದು, ಬೆಂಗಳೂರಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಪ್ರೇಮ್ ರಾಜ್ ಎಸ್ ಬಿಆರ್ ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿಂದ ಕೆಲಸ ತೊರೆದು ಹೊಟೇಲ್ ವೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಧಮೇಂದ್ರನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.
ಬುಧವಾರ ಇಬ್ಬರೂ ಬಾರ್ ಗೆ ಹೋಗಿ ಮದ್ಯ ಸೇವಿಸಿ ಮನೆಗೆ ಬಂದಾಗ ಧರ್ಮೇಂದ್ರ ಸಿಂಗ್ ಮಗಳನ್ನು ಪ್ರೇಮ್ ರಾಜ್ ನಿಂದಿಸಿದ್ದಾನೆ. ಇದರಿಂದ ಕೋಪಗೊಂಡ ಧರ್ಮೇಂದ್ರ ಸಿಂಗ್ ನಶೆಯಲ್ಲಿ ಕೊಲೆ ಮಾಡಿದ್ದಾನೆ.
ಕೊಲೆ ಬಳಿಕ ಸ್ನೇಹಿತನಿಗೆ ಕರೆ ಮಾಡಿ ತಾನು ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ್ದು ಶವ ಸ್ಥಳಾಂತರಿಸಬೇಕಿದೆ. ಇದಕ್ಕೆ 10 ಸಾವಿರ ರೂಪಾಯಿ ನೀಡುವುದಾಗಿ ಧರ್ಮೇಂದ್ರ ಸಿಂಗ್ ಹೇಳಿದ್ದ. ಬಳಿಕ ಪೊಲೀಸರಿಗ ಕರೆ ಮಾಡಿ ಹತ್ಯೆ ಬಗ್ಗೆ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಬಂದ ಕಾಡುಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.