ಮಂಡ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.
ರಾಜೇನಹಳ್ಳಿ ರೈತ ರವಿಕುಮಾರ್(43) ಮೃತ ರೈತ.
ಹುಲ್ಲು ಕುಯ್ಯಲು ಜಮೀನಿಗೆ ತೆರಳಿದ್ದ ವೇಳೆ ತುಂಡಾದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಚೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.