ಮನೆ ಅಪರಾಧ ಮಂಡ್ಯ: ಜಮೀನಿನ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಂಡ್ಯ: ಜಮೀನಿನ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

0

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ- ಹೊಸಹಳ್ಳಿ ಮುಖ್ಯರಸ್ತೆ ಬದಿಯ ಜಮೀನಿನ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಸುಮಾರು 20 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಈತನ ಹೆಸರು ವಿಳಾಸ ಮಾಹಿತಿ ತಿಳಿದು ಬಂದಿಲ್ಲ. ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಸ್ಥಳಕ್ಕೆ ಡಿವೈಎಸ್ ಪಿ ನವೀನ್ ಕುಮಾರ್ ಸೇರಿ ಬೆಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಾಯದಿಂದ 40 ಅಡಿಯಲ್ಲಿ ಬಿದ್ದಿದ್ದ ಶವವನ್ನು ಮೇಲೆತ್ತಲಾಗಿದೆ.

ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ಎರಡು ವಾರಗಳ ಹಿಂದೆ ಈ ಶವವು ಇಲ್ಲಿ ಬಿದ್ದಿರುವ ಮಾಹಿತಿ ಲಭ್ಯವಾಗಿದೆ.

ಮಂಡ್ಯ ವಿಮ್ಸ್ ಶವಗಾರಕ್ಕೆ ಮೃತ ದೇಹ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಸತ್ಯಾಸತ್ಯತೆಗಳು ಹೊರಬೀಳಲಿದೆ.

ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನಮಂಡ್ಯ: ಮನೆಯಲ್ಲಿ ಕಟ್ಟಿದ್ದ ಕರು ಮೇಲೆ ಚಿರತೆ ದಾಳಿ
ಮುಂದಿನ ಲೇಖನಡಾಲಿ ಧನಂಜಯ್ ಹುಟ್ಟುಹಬ್ಬದ ಪ್ರಯುಕ್ತ ಉತ್ತರಕಾಂಡ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್