Saval TV on YouTube
ಮಂಡ್ಯ(Mandya): ಒಂಟಿ ಮಹಿಳೆಯನ್ನು ಸಜೀವ ದಹನ ಮಾಡಿರುವ ಪ್ರಕರಣ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮಾರಸಿಂಗನಹಳ್ಳಿ ಗ್ರಾಮದ ಪ್ರೇಮ(42) ಹತ್ಯೆಯಾಗಿರುವ ಮಹಿಳೆ.
ಪತಿ ನಿಧನದ ಬಳಿಕ ಒಂಟಿಯಾಗಿದ್ದ ಪ್ರೇಮ ತಮ್ಮ ಮನೆಯಲ್ಲಿ ಒಂಟಿಯಾಗಿದ್ದರು. ರಾತ್ರಿ ಕೊಲೆಯಾಗಿದ್ದಾರೆ. ಗಂಡನ ನಿಧನದ ಬಳಿಕ ಪ್ರೇಮ ಅದೇ ಊರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪ್ರೇಮ ಅವರ ಓರ್ವ ಪುತ್ರ ಬೆಂಗಳೂರಿನಲ್ಲಿ ವಾಸವಿದ್ದಾನೆ ಎಂದು ತಿಳಿದುಬಂದಿದೆ. ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ಒಂಟಿಯಾಗಿ ಮಲಗಿದ್ದಾಗ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.














