ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕಾಲುವೆ ದುರಂತ ಸಂಭವಿಸಿದ್ದು, ವಿಸಿ ನಾಲೆಗೆ ಕಾರು ಉರುಳಿಬಿದ್ದಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ನೀರಿಲ್ಲದೆ ಕಾಲುವೆಗೆ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕಾರು ಉರುಳಿ ಬಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಮೃತರು ಅಣ್ಣತಮ್ಮಂದಿರು ಎಂದು ತಿಳಿದುಬಂದಿದ್ದು, ಇತರ ಮಾಹಿತಿ ತಿಳಿದು ಬಂದಿಲ್ಲ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Saval TV on YouTube