ಮಂಡ್ಯ: ಮಂಗಳವಾರ ತಾಲೂಕಿನ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಐವರು ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಕ್(28), ಅತೀಕ್(22) ಎಂಬಿಬ್ಬರ ಮೃತದೇಹ ಇಂದು ಪತ್ತೆಯಾಗಿದೆ.
ಪತ್ತೆಯಾದ ಶವಗಳ ಮರಣೋತ್ತರ ಪರೀಕ್ಷೆಗೆ ಮಿಮ್ಸ್ಗೆ ರವಾನೆ ಮಾಡಲಾಗಿದೆ.
ನಿನ್ನೆ ಈಜಲು ಹೋಗಿದ್ದ ವೇಳೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರ ಶವಗಳು ಪತ್ತೆಯಾಗಿದ್ದವು. ನಿನ್ನೆಯಿಂದ ಇನ್ನಿಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇದೀಗ ಇಬ್ಬರ ಶವಗಳು ಸಿಕ್ಕಿದೆ.
ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೃತರು. ರಂಜಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಈಜಲು ತೆರಳಿ, ನೀರುಪಾಲಾಗಿದ್ದರು.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಾವನ್ನಪ್ಪಿದ್ದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22) ಅವರ ಮೃತ ದೇಹಗಳನ್ನ ಹೊರತೆಗೆಯಲಾಗಿತ್ತು. ಇಂದು ಇನ್ನಿಬ್ಬರಾದ ಅಶ್ರಕ್ (28), ಅತೀಕ್ (22) ಮೃತದೇಹಗಳನ್ನ ಪತ್ತೆ ಮಾಡಲಾಗಿದೆ.