ಮಂಡ್ಯ: ಕೌಟುಂಬಿಕ ಕಲಹದಿಂದಾಗಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ.
ಪ್ರಭಾವತಿ(45), ದಿಲೀಪ್ (45) ಮೃತ ದಂಪತಿಗಳು.
ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕಳೆದ ರಾತ್ರಿ ಪ್ರಭಾವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಪತ್ನಿ ಸಾವಿನಿಂದ ನೊಂದು ಬೆಳಗ್ಗೆ ಪತಿ ದಿಲೀಪ್ ಕೂಡ ಬಾಬುರಾಯನ ಕೊಪಲ್ಲು ಬಳಿ ಜಮೀನೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.