ಮನೆ ಅಪರಾಧ ಮಂಡ್ಯ: ಖ್ಯಾತ ವೈದ್ಯ ಡಾ.ವೇಣುಗೋಪಾಲ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಡ್ಯ: ಖ್ಯಾತ ವೈದ್ಯ ಡಾ.ವೇಣುಗೋಪಾಲ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0

ಮಂಡ್ಯ: ಖ್ಯಾತ ವೈದ್ಯ ಡಾ.ವೇಣುಗೋಪಾಲ್ (57) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದ ಕೆರೆಯ ಬಳಿ ಇಂದು ಬೆಳಿಗ್ಗೆ ಕಂಡುಬಂದಿದೆ.

Join Our Whatsapp Group

ಇವರು ಮಂಡ್ಯದ ಉಮ್ಮಡಹಳ್ಳಿ ಗೇಟ್ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಸಾಂಜೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಡಾ.ವೇಣುಗೋಪಾಲ್ ಎಂದಿನಂತೆ ಗುರುವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಹಲವು ಮಂದಿಗೆ ಚಿಕಿತ್ಸೆ ಮಾಡಿದ್ದಾರೆ. ಮಧ್ಯಾಹ್ನ 3-4 ಗಂಟೆಯ ಸುಮಾರಿಗೆ ಆಸ್ಪತ್ರೆಯಿಂದ ಹೊರಟಿರುವ ಅವರು ಮದ್ದೂರು ಸಾರಿಗೆ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಗುರುವಾರ ರಾತ್ರಿ 10 ಗಂಟೆ ವೇಳೆಗೆ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದ ಕೆರೆಯ ಬಳಿ ತೆರಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸ್ಥಳೀಯರು ಇಂದು ಬೆಳಗ್ಗೆ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ ವೇಣುಗೋಪಾಲ್ ಮೃತದೇಹ ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಜನರು ಮದ್ದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಶವವನ್ನು ರವಾನಿಸಿದ್ದಾರೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.