ಬೆಂಗಳೂರು: ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ.
ಇದರಿಂದ ಬೇಸತ್ತು ಡಾ.ನಟರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.