ಮನೆ ಅಪರಾಧ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ

0

ಬೆಂಗಳೂರು: ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ ​ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ.

ಇದರಿಂದ ಬೇಸತ್ತು ಡಾ.ನಟರಾಜ್​​ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಅಪಹರಣ
ಮುಂದಿನ ಲೇಖನಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ