ಮನೆ ಸುದ್ದಿ ಜಾಲ ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ- ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ ಚೆಕ್...

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ- ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

0

ಮಂಡ್ಯ(Mandya): ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸರ್ಕಾರದ 10 ಲಕ್ಷ ರೂ. ಚೆಕ್​​ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.

ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಬಾಲಕಿಯ ಮೇಲೆ ನಡೆದಿರುವುದು‌ ಅಮಾನುಷ ಕೃತ್ಯ.  ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರ ಘೋಷಣೆ ಮಾಡಿದ್ದರು.