ಮನೆ ಕಾನೂನು ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ

0

ಮಂಡ್ಯ :- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ,ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.


ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲ್ಯಾಕ್ ಹತ್ತನೇ ಕ್ರಾಸ್ ನ ಗೌನ್ ಪಾಷಾರ ಮಗ ಸಲ್ಮಾನ್ ಪಾಷಾ ಜಿ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಸಲ್ಮಾನ್‌ಪಾಷ ಬಡಾವಣೆಯ ಅಪ್ರಾಪ್ತ ವಯಸ್ಸಿನ ಬಾಲಕಿ ಶಾಲೆಗೆ ಮತ್ತು ಟ್ಯೂಷನ್‌ಗೆ ಹೋಗುವಾಗ ಮತ್ತು ಬರುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ತಿಂಡಿ ಕೊಟ್ಟು ಮಾತನಾಡಿಸುತ್ತಿದ್ದು, ಅಪ್ರಾಪ್ತ ಬಾಲಕಿ ಪ್ರತಿದಿನ ಸಂಜೆ ಟ್ಯೂಷನ್‌ ಗೆ ಹೋಗುವಾಗ ಆರೋಪಿಯು ಬಾಲಕಿಯನ್ನು ಯಾರು ಇಲ್ಲದ ಸಮಯದಲ್ಲಿ ತನ್ನ ರೂಂಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದು, 2022ನೇ ಜುಲೈ 3 ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಉದ್ದೇಶದಿಂದ ಮದ್ಯರಾತ್ರಿ ಅಪ್ರಾಪ್ತ ಬಾಲಕಿಯ ಮನೆಯ ಕಾಂಪೌಂಡ್ ಒಳಗೆ ಅಕ್ರಮ ಪ್ರವೇಶ ಮಾಡಿ ಬಾಲಕಿ ಮಲಗಿದ್ದ ಮನೆಯ ರೂಂನ ಕಿಟಕಿಯ ಮೂಲಕ ಅಪ್ರಾಪ್ತ ಬಾಲಕಿಯನ್ನು ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಲಿಫ್ಟ್ ಕೊಡುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆ
ಪ್ರಕರಣ ಕುರಿತಂತೆ ದೂರು ದಾಖಲಾದ ನಂತರ ಭಾದಂಸಂ 354(ಡಿ), 366, 378(ಎಬಿ), 376 (2)(ಎನ್) ಐಪಿಸಿ & ಕಲಂ 6, 12 ಪೋಕೋ ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಅಂದಿನ ಇನ್ಸ್‌ಪೆಕ್ಟರ್ ಕೃಷ್ಣ.ಎಸ್.ಕೆ. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷ
ರೋಪಣಾ ಪತ್ರವನ್ನು ಸಲ್ಲಿಸಿದ್ದರು.
ವಿಶೇಷ ಪ್ರಕರಣ ಕುರಿತಂತೆ ಮಂಡ್ಯದ ಅಧಿಕ ಸತ್ಯ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ರವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಸಲ್ಮಾನ್ ಪಾಷನಿಗೆ ಭಾದಂಸಂ ಕಲಂ 354(ಡಿ) ಮತ್ತು ಪೋಕೋ ಕಾಯ್ದೆ ಕಲಂ 12 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಕಠಿಣ ಶಿಕ್ಷೆ ಮತ್ತು 5,000/- ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಭಾದಂಸಂ ಕಲಂ 363 & 366 ಕಾಯ್ದೆ ಅಡಿಯಲ್ಲಿನ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10,000/-
ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು ಹಾಗೂ ಭಾದಂಸಂ ಕಲಂ 447 ಅಡಿಯಲ್ಲಿನ ಅಪರಾಧಕ್ಕೆ 3 ತಿಂಗಳ ಕಠಿಣ ಶಿಕ್ಷೆ ಮತ್ತು 500/- ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 15 ದಿನಗಳ ಸಾದಾ ಶಿಕ್ಷೆ” ಯನ್ನು ಹಾಗೂbಭಾದಂಸಂ ಕಲಂ 376ಎಬಿ ಮತ್ತು ಪೋಕೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ 21 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000/- ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷ ಕಠಿಣ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.
ವಿಶೇಷ ಸರ್ಕಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು.

ಹಿಂದಿನ ಲೇಖನಪ್ರತಾಪ್ ಸಿಂಹ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ: ಡಾ.ಸಿ.ಎನ್ ಅಶ್ವಥ್ ನಾರಾಯಣ್
ಮುಂದಿನ ಲೇಖನಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕು: ಡಾ. ಕೆ ವಿ ರಾಜೇಂದ್ರ