ಮಂಡ್ಯ: ಜಿಲ್ಲೆಯ ಪ್ರವಾಸಿತಾಣ ಮತ್ತು ಧಾರ್ಮಿಕ ಕ್ಷೇತ್ರ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿರುವುದು ವರದಿಯಾಗಿದೆ.
ರಾಮನಗರ ಜಿಲ್ಲೆ, ಕನಕಪುರ ತಾಲೂಕು ಗಾಣಾಳು ಗ್ರಾಮದ ಶೋಭಾ(23) ಹಾಗೂ ನಾದಿಯ(19) ಮೃತಪಟ್ಟ ಯುವತಿಯರು.
ಇವರು ತಮ್ಮ ಕುಟುಂಬದವರ ಜತೆ ದೇವರ ದರ್ಶನಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಯುವತಿಯರು ದೇವರ ಕಾರ್ಯಕ್ರಮಕ್ಕೆ ಬಂದಿದ್ದಾಗ ಕಾವೇರಿ ನದಿಯಲ್ಲಿ ಈಜಲು ಹೋಗಿ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದ್ದು, ಮೃತದೇಹಗಳನ್ನು ಹೊರತೆಗೆದು ಪಂಚನಾಮೆಗಾಗಿ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Saval TV on YouTube