ಮನೆ ರಾಜ್ಯ ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಬಲಿ

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಬಲಿ

0

ಮಂಡ್ಯ: ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಜಮೀನಿನ ಬಳಿ ತೆರಳಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.

ಲಾಳನಕೆರೆ ಗ್ರಾಮದ ಕಾರ್ಮಿಕ ಮಹಿಳೆ ಸಾಕಮ್ಮ(೫೦) ಮೃತ ದುರ್ದೈವಿ.

ಸಾಕಮ್ಮ ನಿನ್ನೆ ಬೆಳ್ಳಗ್ಗೆ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಕಾಡಾನೆ ದಾಳಿ ಮಾಡಿದೆ.

ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದ ಸಾಕಮ್ಮ ಪೀಹಳ್ಳಿ ಗ್ರಾಮದ ಮಾಲೀಕರೊಬ್ಬರ ಜಮೀನಿಗೆ ಕೂಲಿ ಕೆಲಸಕ್ಕಾಗಿ ತೆರಳಿದ್ದರು ಇವರ ಜೊತೆ ಎಂಟಕ್ಕೂ ಹೆಚ್ಚು ಮಂದಿ ಕೂಲಿ ಕೆಲಸಕ ಮಾಡುತ್ತಿದ್ದರು. ಆನೆ ಪ್ರತ್ಯಕ್ಷವಾಗಿರುವ ಬಗ್ಗೆ ಯಾವುದೇ ಸುಳಿವು ಇಲ್ಲದ ಹಿನ್ನೆಲೆಯಲ್ಲಿ ಭಯ ಪ್ರೀತಿ ಇಲ್ಲದೆ ಕೆಲಸ ಮಾಡುತ್ತಿದ್ದರು. ಈ ವೇಳೆ ಕಬ್ಬಿನ ಗದ್ದೆಯಲ್ಲಿ ಬಿಡು ಬಿಟ್ಟಿದ್ದ ಆನೆಗಳ ಹಿಂಡಿನಲ್ಲಿದ್ದ ಸಲಗ ಮಹಿಳೆ ಮೇಲೆ ಏಕಾಏಕಿ ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಸಾಕಮ್ಮ ಪ್ರಯತ್ನ ಮಾಡಿದರಾದರೂ ಅಷ್ಟರಲ್ಲಿ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಗ್ರಾಮಾಂತರ ಪೊಲೀಸರು ತೆರಳಿದ್ದು, ಕಾಡಾನೆಗಳನ್ನು ಗ್ರಾಮದಿಂದ ಕಾಡಿಗೆ ಅಟ್ಟಲು ಪ್ರಯತ್ನಿಸುತ್ತಿದ್ದಾರೆ. ಆನೆ ದಾಳಿಯಿಂದ ಮಹಿಳೆ ಸಾವನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಸುದ್ದಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಆನೆಗಳ ಹಿಂಡನ್ನು ಕಾಡಿಗಟ್ಟಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಸಾಂತ್ವನ ಹೇಳಿದರು.

ಹಿಂದಿನ ಲೇಖನಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ: ಸಿದ್ದಲಿಂಗ ಸ್ವಾಮೀಜಿ ಆರೋಪ
ಮುಂದಿನ ಲೇಖನಜನನ-ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ; ತಿದ್ದುಪಡಿ ಅಧಿಕಾರ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧಾರ