ಮನೆ ಪ್ರಕೃತಿ ಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂ.ಮೀ.ಮಳೆ

ಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂ.ಮೀ.ಮಳೆ

0

ಮಂಗಳೂರು(Mangalore): ದಕ್ಷಿಣ ಕನ್ನಡ ತಾಲ್ಲೂಕಿನ ಪಾವೂರಲ್ಲಿ ಅರ್ಧಗಂಟೆಯಲ್ಲಿ 6.4 ಸೆಂಟಿ ಮೀಟರ್‌ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ಗುರುವಾರ ಬೆಳಿಗ್ಗೆ 8.30ರಿಂದ 9 ಗಂಟೆ ಅವಧಿಯಲ್ಲಿ ಇಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಕಳೆದ  24 ಗಂಟೆಗಳಲ್ಲಿ ಉಡುಪಿ ಜಿಲ್ಲೆ ನಾಡಾದಲ್ಲಿ 24.7 ಸೆಂಟಿ ಮೀಟರ್‌, ದಕ್ಷಿಣ ಕನ್ನಡ ಜಿಲ್ಲೆ ಮಾವಳ್ಳಿಯಲ್ಲಿ 20.4 ಸೆಂಟಿ ಮೀಟರ್‌ ಮಳೆಯಾಗಿದೆ.

ಪಡೀಲ್ ರೈಲ್ವೆ ಕೆಳಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕೈದು ಅಡಿ ನೀರು ನಿಂತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಮಂಗಳೂರಿನ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಗಾ ವಹಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದರೆ ಎಲ್ಲಾ ಮುಂಜಾಗ್ರತೆ ವಹಿಸಿ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಲಾಗಿದೆ  ಎಂದು ತಿಳಿಸಿದ್ದಾರೆ.

ಶಾಲೆಗೆ ಬಂದಿರುವ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ತಾಲ್ಲೂಕುಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧಾರ ಕೈಗೊಳ್ಳಲು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಇಲಾಖೆ ಗುರುವಾರ ಯಲ್ಲೋ ಅಲರ್ಟ್‌ ಘೋಷಿಸಿದೆ. ಶುಕ್ರವಾರವೂ ಇದೇ ರೀತಿ ಮಳೆಯಾದರೆ, ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.