ಮಂಗಳೂರು(Mangalore): ನಗರದ ಕಾಲೇಜೊಂದರ ವಿದ್ಯಾರ್ಥಿನಿಲಯದಿಂದ ಮೂವರು ವಿದ್ಯಾರ್ಥಿನಿಯರು ಬುಧವಾರ ನಾಪತ್ತೆಯಾಗಿದ್ದು, ವಿದ್ಯಾರ್ಥಿನಿಯರು ಬ್ಯಾಗ್ ಹಿಡಿದು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಹಾಸ್ಟೆಲ್ನವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿನಿಯರು ಎಲ್ಲಿಗೆ ಹೋಗಿದ್ದಾರೆ ಎಂದು ತಿಳಿದಿಲ್ಲ. ಅವರ ಮನೆಯವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುವ ಪ್ರಯತ್ನದಲ್ಲಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ.
“ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.
ಕಂಕನಾಡಿ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.














