ಮನೆ ಅಪರಾಧ ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

0

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Our Whatsapp Group

ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ.

ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.