ಮಂಗಳೂರು(ದಕ್ಷಿಣ ಕನ್ನಡ): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಎಂದು ಗುರುತಿಸಲಾಗಿದೆ.
ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದ ಈತನ ಮೃತದೇಹ ಇಂದು ಪುದುವೆಟ್ಟುವಿನಲ್ಲಿರುವ ಅವರ ಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರನಾಗಿದ್ದ ಈತ ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.